ವಿರಾಟ್ ವಿರುದ್ಧ ಗವಾಸ್ಕರ್ ಕಿಡಿ

ವಿರಾಟ್ ವಿರುದ್ಧ ಗವಾಸ್ಕರ್ ಕಿಡಿ

ಕೋಲ್ಕತ್ತಾ, ನ. 25 : ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಹೊಗಳಿದ ಕೊಹ್ಲಿ ವಿರುದ್ಧ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಕೊಹ್ಲಿ ಅವರ ಹೇಳಿಕೆಗೆ ಕೆಂಡಾಮಂಡಲವಾಗಿರುವ ಮಾಜಿ ಆಟಗಾರ ಸುನಿಲ್ ಗವಾಸ್ಕಾರ್, ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದು, ಬಹಳ ಸಂತೋಷ. ವಿರಾಟ್ ಕೊಹ್ಲಿ ಅವರು ಭಾರತ 1970 ಮತ್ತು 1980 ರ ಸಮಯದಲ್ಲಿಯೂ ಗೆಲುವು ಸಾಧಿಸಿತ್ತು ಎಂಬುದನ್ನು ಮರೆತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಗಂಗೂಲಿ ಅವರನ್ನು ಹೊಗಳಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ.
ಈಡನ್ ಗಾರ್ಡನ್ಸ್ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಮೊದಲ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತದ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಒಂದು ಇನ್ನಿಂಗ್ಸ್ ಮತ್ತು 46 ರನ್ ಗಳಿಂದ ಗೆಲ್ಲುವ ಮೂಲಕ ಬಾಂಗ್ಲಾದೇಶದ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಭಾರತ ಕ್ಲೀನ್ಸ್ವೀಪ್ ಮಾಡಿಕೊಂಡಿದೆ.

ಫ್ರೆಶ್ ನ್ಯೂಸ್

Latest Posts

Featured Videos