ಮುಂಬೈ, ಏ. 15, ನ್ಯೂಸ್ ಎಕ್ಸ್ ಪ್ರೆಸ್: ಮೇ ತಿಂಗಳಿನಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟವಾಗಿದ್ದು, ವಿರಾಟ್ ಬಳಗದ ಬಹು ನಿರೀಕ್ಷಿತ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.
ಎಂ ಎಸ್ ಕೆ ಪ್ರಸಾದ್ ನೇತೃತ್ವದಲ್ಲಿ ಮುಂಬೈಯಲ್ಲಿ ಸಭೆ ಸೇರಿದ ಆಯ್ಕೆ ಸಮಿತಿ ವಿಶ್ವ ಕಪ್ ಗಾಗಿ 15ಸದಸ್ಯರ ಬಲಿಷ್ಠ ತಂಡವನ್ನೇ ಪ್ರಕಟಿಸಿದೆ . ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ವಿಶ್ವಕಪ್ ಆಡಲಿದ್ದು, ರೋಹಿತ್ ಶರ್ಮ ಉಪನಾಯಕನ ಜವಾಬ್ದಾರಿ ಹೊರಲಿದ್ದಾರೆ . ಬಹುತೇಕ ಕೊನೆಯ ವಿಶ್ವಕಪ್ ಆಡುತ್ತಿರುವ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಕೀಪರ್ ಆಗಿದ್ದು, 2ನೇ ಕೀಪರ್ ಆಗಿ ದಿನೇಶ್ ಕಾರ್ತಿಕ್ಆಯ್ಕೆಯಾಗಿದ್ದಾರೆ
ಟೀಮ್ ಇಂಡಿಯಾದ ಬಹು ಚರ್ಚಿತ 4ನೇ ಕ್ರಮಾಂಕಕ್ಕೆ ಆಯ್ಕೆಯಾಗಿದ್ದು 1 ವರ್ಷಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಷಬ್ ಪಂತ್ , ಅಂಬಾಟಿ ರಾಯುಡು, ವಿಜಯ್ ಶಂಕರ್, ಶ್ರೇಯಸ್ ಅಯ್ಯರ್ ನಡುವೆ ಸ್ಪರ್ಧೆ ಇದ್ದು, ಅಂತಿಮವಾಗಿ ವಿಜಯ್ ಶಂಕರ್ ಆಯ್ಕೆಯಾಗಿದ್ದಾರೆ. ಕನ್ನಡಿಗ ಕೆ.ಎಲ್ ರಾಹುಲ್ ತೃತೀಯ ಆರಂಭಿಕನಾಗಿ ಆಯ್ಕೆ ಆಗಿದ್ದಾರೆ.