ನವದೆಹಲಿ ಏ. 8, ನ್ಯೂಸ್ ಎಕ್ಸ್ ಪ್ರೆಸ್: 2019ರ ವಿಶ್ವಕಪ್ ಟೂರ್ನಿಗೆ ಬಿಸಿಸಿಐ ಏ.15ಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಲಿದೆ. ಏ.23ರ ಒಳಗೆ ಐಸಿಸಿಗೆ 15 ಸದಸ್ಯರ ತಂಡದ ಪಟ್ಟಿ ನೀಡಬೇಕು. ಸದ್ಯ ಐಪಿಎಲ್ ಟೂರ್ನಿ ನಡುವೆಯೇ ತಂಡ ಪ್ರಕಟಿಸಲು ಐಸಿಸಿಐ ಮುಂದಾಗಿದೆ.
ಟೀಂ ಇಂಡಿಯಾದ ವಿಶ್ವಕಪ್ ತಂಡ ಬಹುತೇಕ ಅಂತಿಮಗೊಂಡಿದೆ. ಆದರೆ 4ನೇ ಕ್ರಮಾಂಕಕ್ಕೆ ಯಾರನ್ನು ಆಯ್ಕೆ ಮಾಡಬೇಕು ಅನ್ನೋ ಗೊಂದಲ ಆಯ್ಕೆ ಸಮಿತಿಯಲ್ಲಿತ್ತು. ಅದಕ್ಕಾಗಿ ತಂಡದ ಆಯ್ಕೆ ವಿಳಂಭವಾಗಿತ್ತು.
ಏ.15ರಂದು ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಅಂತಿಮ ಆಯ್ಕೆ ನಡೆಸಲಿದೆ.
ಅಂಬಾಟಿ ರಾಯುಡು, ರಿಷಬ್ ಪಂತ್ ಹಾಗೂ ವಿಜಯ್ ಶಂಕರ್ ನಡುವೆ ನಾಲ್ಕನೇ ಕ್ರಮಾಂಕಕ್ಕೆ ಪೈಪೋಟಿ ಎರ್ಪಟ್ಟಿದೆ. ಈ ಬಾರಿಯ ವಿಶ್ವಕಪ್ ತಂಡದಲ್ಲಿ ಕನ್ನಡಿಗರಿಗೆ ಅವಕಾಶ ಸಿಗುತ್ತಾ ಅನ್ನೋ ಕುತೂಹಲ ಕರ್ನಾಟಕದಲ್ಲಿ ಮನೆ ಮಾಡಿದೆ.