ವಿಶ್ವವಿದ್ಯಾಲಯಗಳಲ್ಲಿ 200 ಪಾಯಿಂಟ್ ರೋಸ್ಟರ್ ಜಾರಿಗೆ

ವಿಶ್ವವಿದ್ಯಾಲಯಗಳಲ್ಲಿ 200 ಪಾಯಿಂಟ್ ರೋಸ್ಟರ್ ಜಾರಿಗೆ

ಬೆಂಗಳೂರು , ಮಾ.7, ನ್ಯೂಸ್ ಎಕ್ಸ್ ಪ್ರೆಸ್: ವಿವಿಯಲ್ಲಿ 200 ಪಾಯಿಂಟ್ ರೋಸ್ಟರ್ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಇಂದು ಒಪ್ಪಿಗೆ ನೀಡಿದೆ. ಅದಕ್ಕಾಗಿ ಸುಗ್ರೀವಾಜ್ಞೆಯನ್ನು ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಗೆ ನೀಡಲಾಗಿದೆ.

ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು, ಪ್ರಾಧ್ಯಪಕರಿಂದ ಹೇಳಿಬಂದಿದ್ದ ಬೇಡಿಕೆಯನ್ನು ಈಡೇರಿಸಲು ಒಪ್ಪಿಗೆ ನೀಡಲಾಯಿತು.

ಈ ಹಿಂದೆ ಪ.ಜಾ/ಪ.ಪಂ ಮತ್ತು ಹಿಂದುಳಿದ ವರ್ಗಗಳ ಶಿಕ್ಷಕರ ನೇರ ನೇಮಕಾತಿಗೆ ಹೊರಡಿಸಿದ್ದ ಯುಜಿಸಿ ಆದೇಶಕ್ಕೆ ಸರ್ಕಾರದಿಂದಲೇ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಸಚಿವ ತಾವರ್ ಚಂದ್ ಗೆಹ್ಲೋಟ್ ಇದನ್ನು ವಿರೋಧಿಸಿ ಯುಜಿಸಿಗೆ ಪತ್ರ ಬರೆದಿದ್ದರು.

ಯುಜಿಸಿ ಹೊರಡಿಸಿದ್ದ ನೇಮಕಾತಿ ಆದೇಶದಿಂದಾಗಿ ಮೀಸಲಾತಿ ಆದೇಶಕ್ಕೆ ಧಕ್ಕೆ ಬಂದಿದೆ ಎಂದು ಸಚಿವರು ದೂರಿದ್ದರು.

ಈ ಮೀಸಲಾತಿ ಅನ್ವಯ ನೇಮಕಾತಿ ನಡೆದರೆ ಪ.ಜಾ/ಪ.ಪಂ/ಹಿಂದುಳಿದ ವರ್ಗಗಳ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಸಂಖ್ಯೆಯಲ್ಲಿ ಇಳಿಮುಖವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಾಗ ಮೀಸಲಾತಿ ಅಧಿಸೂಚನೆಯನ್ನು ಸುಗ್ರೀವಾಜ್ಞೆ ಮೂಲಕ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. 200 ಪಾಯಿಂಟ್ ರೋಸ್ಟರ್ ವ್ಯವಸ್ಥೆಯನ್ನು ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos