ಬೆಂಗಳೂರು, ಮಾ.7, ನ್ಯೂಸ್ ಎಕ್ಸ್ ಪ್ರೆಸ್: ಅನ್ಯಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ಇಂದು ಹಾಜರಾದರು.
ಪ್ರವಾಸಿ ಮಂದಿರವೊಂದರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಟ್ಕಳ ಹಾಗೂ ಅಜಂಘಡ ಭಯೋತ್ಪಾದಕರ ಉತ್ಪಾದನಾ ಕೇಂದ್ರ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಅನಂತ್ ಕುಮಾರ್ ಹೆಗಡೆ ವಿರುದ್ದ ಸಿರಸಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ವಿಚಾರಣೆ ಆರಂಭವಾದ ಹಿನ್ನೆಲೆ ಕೋರ್ಟ್ಗೆ ಖುದ್ದು ಅನಂತ್ ಕುಮಾರ್ ಹೆಗಡೆ ಬಂದಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.