ಅಭ್ಯರ್ಥಿಗಳ ‘ಹಣೆಬರಹ’ ಬರೆಯುತ್ತಿರುವ ಮತದಾರರು

ಅಭ್ಯರ್ಥಿಗಳ ‘ಹಣೆಬರಹ’ ಬರೆಯುತ್ತಿರುವ ಮತದಾರರು

ಬೆಂಗಳೂರು, ಏ. 18, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದ್ದು, ಕೆಲವೆಡೆ ಬಿರುಸಿನಿಂದ ಸಾಗಿದ್ದರೆ, ಮತ್ತೆ ಕೆಲವೆಡೆ ಮಂದಗತಿಯಲ್ಲಿ ಸಾಗಿದೆ. ಬೆಳಿಗ್ಗೆಯಿಂದಲೇ ಸರತಿಯ ಸಾಲಿನಲ್ಲಿ ಮತದಾರರು ಮತಗಟ್ಟೆಯ ಬಳಿ ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೆಲ ಕಡೆಗಳಲ್ಲಿನ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ತಡವಾಗಿ ಮತದಾನ ಆರಂಭವಾಗಿದೆ. ಕೂಡಲೇ ಬದಲಿ ಮತಯಂತ್ರ ಬಳಸಿ ಮತದಾನ ಆರಂಭಿಸಲಾಗಿದೆ. ಶಾಂತಿಯುತವಾಗಿ ಮತದಾನ ಆರಂಭವಾಗಿದೆ. ಮತದಾರರು ತಮ್ಮ ಮತ ಹಕ್ಕು ಚಲಾಯಿಸುವ ಮೂಲಕ ಅಭ್ಯರ್ಥಿಗಳ ಹಣೆಬರಹ ಬರೆಯುತ್ತಿದ್ದು, ಫಲಿತಾಂಶ ಏನಾಗುವುದೋ ಎಂಬ ಆತಂಕದಲ್ಲಿ ಅಭ್ಯರ್ಥಿಗಳಿದ್ದಾರೆ. ಏಪ್ರಿಲ್‌ 23 ರಂದು 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೊರ ಬೀಳಲಿದೆ.

ಫ್ರೆಶ್ ನ್ಯೂಸ್

Latest Posts

Featured Videos