ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಶುರು

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಶುರು

ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ಮೊದಲನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

ಇನ್ನೂ ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಕರೆ ನೀಡಿದರು. ಬೆಂಗಳೂರಿನ ಜಯನಗರದ ಬಿಇಎಸ್​ ಕಾಲೇಜಿನಲ್ಲಿ ಮತದಾನ ಮಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಬಂದು ಜನ ಮತದಾನ ಮಾಡಬೇಕು. ಮುಖ್ಯವಾಗಿ ಯುವಕ, ಯುವತಿಯರು ಮತದಾನ ಮಾಡಬೇಕು ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos