ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಭಾರಿಸಿದ ವಾರ್ನರ್!

ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಭಾರಿಸಿದ ವಾರ್ನರ್!

ಬೆಂಗಳೂರು: ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಡೇವಿಡ್ ವಾರ್ನರ್ ವಿಶೇಷ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಭರ್ಜರಿ ಆರಂಭ ಒದಗಿಸಿದರು.

ಮೊದಲ ವಿಕೆಟ್​ಗೆ 90 ರನ್​ಗಳ ಜೊತೆಯಾಟವಾಡಿದ ಬಳಿಕ ಡೇವಿಡ್ ವಾರ್ನರ್ (38) ಸಲ್ಮಾನ್ ಅಲಿ ಅಘಾ ಎಸೆತದಲ್ಲಿ ಸ್ಲಿಪ್​ನಲ್ಲಿ ಕ್ಯಾಚ್ ನೀಡಿದರು. ಈ 38 ರನ್​ಗಳ ಇನಿಂಗ್ಸ್​ನೊಂದಿಗೆ ವಾರ್ನರ್ ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ..

 

 

 

ಫ್ರೆಶ್ ನ್ಯೂಸ್

Latest Posts

Featured Videos