ವಾರ್ನರ್‌ ಅಬ್ಬರಕ್ಕೆ ಹೊಸ ದಾಖಲೆ!

ವಾರ್ನರ್‌ ಅಬ್ಬರಕ್ಕೆ ಹೊಸ ದಾಖಲೆ!

ಬೆಂಗಳೂರು: ಪರ್ತ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಡೇವಿಡ್ ವಾರ್ನರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಎಡಗೈ ದಾಂಡಿಗ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ವಾರ್ನರ್ ಕೇವಲ 49 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 81 ರನ್​ ಚಚ್ಚಿದರು. ಈ ಅರ್ಧಶತಕದೊಂದಿಗೆ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 12 ಸಾವಿರ ರನ್ ಪೂರೈಸಿದ ವಿಶ್ವದ 2ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಡೇವಿಡ್ ವಾರ್ನರ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಅಲೆಕ್ಸ್ ಹೇಲ್ಸ್​ ಹೆಸರಿನಲ್ಲಿತ್ತು.

ಆಸ್ಟ್ರೇಲಿಯಾ ಪರ ಹಾಗೂ ಇತರೆ ಹಲವು ಟಿ20 ಲೀಗ್​ಗಳಲ್ಲಿ ಕಣಕ್ಕಿಳಿದಿರುವ ಡೇವಿಡ್ ವಾರ್ನರ್ 12 ಸಾವಿರ ರನ್ ಪೂರೈಸಲು ತೆಗೆದುಕೊಂಡಿರುವುದು ಕೇವಲ 369 ಇನಿಂಗ್ಸ್​ಗಳನ್ನು ಮಾತ್ರ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ವೇಗವಾಗಿ 12 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವುದು ಯೂನಿವರ್ಸ್ ಬಾಸ್ ಕ್ರಿಸ್ ಗೇಲ್. ವೆಸ್ಟ್ ಇಂಡೀಸ್ ಪರ ಹಾಗೂ ವಿಶ್ವದ ಹಲವು ಟಿ20 ಲೀಗ್​ಗಳಲ್ಲಿ ಬ್ಯಾಟ್ ಬೀಸಿರುವ ಗೇಲ್ 353 ಪಂದ್ಯಗಳ ಮೂಲಕ 12 ಸಾವಿರ ರನ್ ಕಲೆಹಾಕಿದ್ದರು. ಈ ಮೂಲಕ ಕ್ರಿಸ್ ಗೇಲ್ ವಿಶೇಷ ವಿಶ್ವ ದಾಖಲೆ ಬರೆದಿಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos