ವಾಟಾಳ್ ನಾಗರಾಜ್ ಬಂಧನ..!

ವಾಟಾಳ್ ನಾಗರಾಜ್ ಬಂಧನ..!

ಬೆಂಗಳೂರು, ಡಿ. 19 : ಕನ್ನಡ ಚಳವಳಿ ಹಾಗೂ ವಾಟಾಳ್ ಪಕ್ಷದ ಅಧ್ಯಕ್ಷ, ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೋಲಿಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ವಾಟಾಳ್ ಮನೆಯಲ್ಲಿ ಪೋಲಿಸರು ವಶಕ್ಕೆ ಪಡೆದಿದ್ದು. ಪೋಲಿಸ್ ವಾಹನದಲ್ಲೆ ಮುಂದಿನ ಸೀಟ್ ನಲ್ಲಿ ಕುರಿಸಿಕೊಂಡು ಸದಾಶಿವನಗರ ಪೋಲಿಸ್ ಠಾಣೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ.
ಪೌರತ್ವ ಕಾಯ್ದೆ ತಿದ್ದುಪಡಿ 2019 ಹಾಗೂ ಎನ್ಆರ್ಸಿ ವಿರೋಧಿಸಿ ಎಡಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಪ್ರ

ತಿಭಟನೆ ನಡೆಸದಂತೆ ನಿಷೇಧಾಜ್ಞೆ ಜಾರಿಯಲ್ಲಿದ್ದರು ಅದನ್ನು ಉಲ್ಲಂಘಿಸಿ ಪ್ರತಿಭಟನೆಗಳು ನಡೆದಿವೆ.
ಪ್ರತಿಭಟನೆಯ ವೇಳೆ ಗಲಭೆ, ಟ್ರಾಫಿಕ್ ಜಾಮ್ ಹಾಗೂ ಹಿಂಸಾಚಾರ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ನಗರ ಪೊಲೀಸ್ ಆಯುಕ್ತರು ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos