ತಮಿಳುನಾಡು ಸರ್ಕಾರದ ಕ್ರಮ ಖಂಡಿಸಿ ವಾಟಾಳ್ ಪ್ರತಿಭಟನೆ

ತಮಿಳುನಾಡು ಸರ್ಕಾರದ ಕ್ರಮ ಖಂಡಿಸಿ ವಾಟಾಳ್ ಪ್ರತಿಭಟನೆ

ಬೆಂಗಳೂರು : ತಮಿಳುನಾಡಿನಲ್ಲಿ ಬಿಜೆಪಿ ಚುನಾವಣೆ ಗೆಲ್ಲಲು ಕೇಂದ್ರ ಸರ್ಕಾರ ರಾಜ್ಯದ ಕಾವೇರಿ ನದಿಯನ್ನು ಬಲಿ ಕೊಡುತ್ತಿದೆ ಎಂದು ಆರೋಪಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಈ ಕ್ರಮದಿಂದ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಾವೇರಿ ನದಿ ಜೋಡಣೆ ಸಂಬಂಧ ಏಕಾಏಕಿ 115ಕಿಮೀ ಉದ್ದದ ಕಾಲುವೆ ತೋಡಲು ಹೊರಟಿರುವ ತಮಿಳುನಾಡು ಸರ್ಕಾರದ ಕ್ರಮ ಖಂಡಿಸಿ ಕನ್ನಡ ಒಕ್ಕೂಟ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಕಾವೇರಿಗೆ ಮತ್ತೆ ಸಂಕಷ್ಟ ಬಂದಿದೆ. ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯವಹಿಸಿದೆ. ತಮಿಳುನಾಡು ಸರ್ಕಾರ ಕಾವೇರಿ ನದಿ ಜೋಡಣೆ ಸಂಬಂಧ 117ಕಿಮೀ ಉದ್ದದ ಕಾಲುವೆ ತೋಡಲು ಕಳೆದ 6 ತಿಂಗಳಿನಿಂದ ಪ್ರಕ್ರಿಯೆ ಆರಂಭಿಸಿ ನೀಲಿ ನಕಾಷೆ ತಯಾರು ಮಾಡಿದೆ.

ಕೇಂದ್ರ ಸರ್ಕಾರ ಇದಕ್ಕೆ ಅಗತ್ಯವಾದ 700 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದನ್ನು ಉದ್ಘಾಟನೆ ಮಾಡಲು ಪ್ರಧಾನಮಂತ್ರಿಗಳು ಕೂಡ ಬರುತ್ತಿದ್ದಾರೆ. ಹೀಗಿದ್ದಾಗ್ಯೂ ಕೂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗುಡುಗಿದರು.

ಫ್ರೆಶ್ ನ್ಯೂಸ್

Latest Posts

Featured Videos