ಹೇಮಾವತಿಯಿಂದ ಪ್ರತಿ ತಾಲೂಕಿಗೆ ನೀರು: ಮಾಧುಸ್ವಾಮಿ

  • In State
  • August 14, 2020
  • 150 Views
ಹೇಮಾವತಿಯಿಂದ ಪ್ರತಿ ತಾಲೂಕಿಗೆ ನೀರು: ಮಾಧುಸ್ವಾಮಿ

ತುಮಕೂರು:ಹೇಮಾವತಿ ನಾಲೆಯಿಂದ ಮೊದಲ ಹಂತದಲ್ಲಿ ಜಿಲ್ಲೆಯ ಶಿರಾ ಹಾಗೂ ಕುಣಿಗಲ್ ತಾಲೂಕಿಗೆ ನೀರನ್ನು ಹರಿಸಲಾಗುತ್ತಿದ್ದು, ಜಿಲ್ಲೆಯ ನಾಲಾ ವ್ಯಾಪ್ತಿಯ ತಾಲೂಕಿಗಳಿಗೆ ತಲಾ ೧೦ ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಹೇಮಾವತಿ ನಾಲೆಯಿಂದ ಹರಿಸಲಾಗುವ ನೀರನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳುವ ಕುರಿತ ವಿಶೇಷ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಹೇಮಾವತಿಯ ಗೊರೂರು ಡ್ಯಾಂನಲ್ಲಿ ೩೩ ಟಿಎಂಸಿ ನೀರು ಸಂಗ್ರಹವಿದ್ದು, ಕಳೆದ ಬಾರಿ ಕಡಿಮೆ ನೀರು ಹರಿದಿದ್ದ ಶಿರಾ ಹಾಗೂ ಕುಣಿಗಲ್ ತಾಲೂಕಿಗೆ ಈಗ ಮೊದಲ ಹಂತದಲ್ಲಿ ನೀರು ಹರಿಸಲಾಗುತ್ತಿದೆ. ತಾಲೂಕಿಗೆ ಪ್ರವೇಶವಾದ ದಿನದಿಂದ ಲೆಕ್ಕ ಹಾಕಿ ೧೦ ದಿನಗಳ ಕಾಲ ನೀರು ಹರಿಸಲಾಗುವುದು. ತಾಲೂಕುವಾರು ಹಂಚಿಕೆಯಾಗಿರುವ ನೀರಿಗೆ ಅನುಗುಣವಾಗಿ ಜನವರಿ ೩೧ರೊಳಗೆ ಸಮರ್ಪಕವಾಗಿ ಹರಿಸಲಾಗುವುದು. ಇದಕ್ಕೆ ಸಂಬಂಧಪಟ್ಟಂತೆ ವೇಳಾಪಟ್ಟಿ ತಯಾರಿಸುವಂತೆ ಹೇಮಾವತಿ ಸಿಇಗೆ ಸೂಚಿಸಿದರು. ಅಲ್ಲದೇ ಡ್ಯಾಂನಲ್ಲಿ ನೀರು ಸಂಗ್ರಹವಾದರೆ ೨ನೇ ಬಾರಿ ನೀರು ಹರಿಸಲಾಗುವುದು ಎಂದರು.
ತುಮಕೂರು ಗ್ರಾಮಾಂತರದಲ್ಲಿ ನೀರು ಹರಿಸಿದರು ಕೆರೆಗಳು ಸಮರ್ಪಕವಾಗಿ ಭರ್ತಿಯಾಗುತ್ತಿಲ್ಲ. ಮೋಟಾರ್ ಪಂಪ್‌ಸೆಟ್‌ಗಳು ದುರಸ್ಥಿಯಲ್ಲಿವೆ ಎಂದು ಶಾಸಕ ಗೌರಿಶಂಕರ್ ಅವರು ಸಚಿವರ ಗಮನಕ್ಕೆ ತಂದಾಗ, ಗ್ರಾಮಾಂತರದಲ್ಲಿ ೧೫ ದಿನದೊಳಗೆ ಪಂಪ್‌ಸೆಟ್ ರಿಪೇರಿ ಮಾಡಿಸಿ, ನೀರು ಹರಿಯುವಂತೆ ಮಾಡಿ ಎಂದು ಇಂಜಿನಿಯರ್‌ಗಳಿಗೆ ಸೂಚನೆ ನೀಡಿದರಲ್ಲದೇ ಈಗಾಗಲೇ ತುರುವೇಕೆರೆ, ತಿಪಟೂರು, ಗುಬ್ಬಿ ತಾಲೂಕಿನಲ್ಲಿ ಕೆರೆಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಳೆದ ಸಾಲಿನಲ್ಲಿ ೧೮.೫ ಟಿಎಂಸಿಯಿಂದ ೨೧ ಟಿಎಂಸಿ ನೀರನ್ನು ತುಮಕೂರು ನಾಲೆಯಿಂದ ಜಿಲ್ಲೆ ಬಳಸಿಕೊಂಡಿದೆ. ಗೊರೊರು ಡ್ಯಾಂನಲ್ಲಿ ನೀರು ಸಂಗ್ರಹವಾಗಿದ್ದು, ನೀರು ವ್ಯರ್ಥವಾಗದಂತೆ ಜಿಲ್ಲೆಯಲ್ಲಿ ಬಳಸಿಕೊಳ್ಳೋಣ. ಹೇಮಾವತಿಯ ಇಂಜಿನಿಯರ್‌ಗಳಿಗೆ ಮುಕ್ತ ಸ್ವಾತಂತ್ರ‍್ಯನೀಡಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮುಂದಾಗಬೇಕು ಎಂದು ಅವರು ತಿಳಿಸಿದರು.
ಸಂಸದ ಡಿ.ಕೆ ಸುರೇಶ್ ಅವರು ಮಾತನಾಡಿ, ಮೊದಲ ಹಂತದಲ್ಲಿ ಜಿಲ್ಲೆಯ ಹೇಮಾವತಿ ನಾಲೆಯಿಂದ ತಾಲೂಕುವಾರು ಹಂಚಿಕೆಯಾಗಿರುವ ನೀರನ್ನು ಸಮರ್ಪಕವಾಗಿ ಹರಿಸಿ ಎಲೆಕ್ಟಾçನಿಕ್ ಗೇಜ್‌ಗಳನ್ನು ಅಳವಡಿಸಿ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos