ನೀರು ಕುರಿತ ಚಿತ್ರಕಲಾ ಸ್ಪರ್ಧೆ

ನೀರು ಕುರಿತ ಚಿತ್ರಕಲಾ ಸ್ಪರ್ಧೆ

ದೊಡ್ಡಬಳ್ಳಾಪುರ, ಸೆ. 11: ‘ಶಾಲಾ ಹಂತದಿಂದಲೇ ಮಕ್ಕಳಲ್ಲಿ ನೀರಿನ ಸಾಂಪ್ರದಾಯಿಕ ಮೂಲಗಳು ಹಾಗೂ ಮಹತ್ವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನೀರು ಕುರಿತ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ’ ಎಂದು ನಗರಸಭೆ ನೀರು ಸರಬರಾಜು ವಿಭಾಗದ ಎಂಜಿನಿಯರ್ ರಾಮೇಗೌಡ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ನಗರಸಭೆ ವತಿಯಿಂದ ಜಲಶಕ್ತಿ ಅಭಿಯಾನದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಿ ಅವರು ಮಾತನಾಡಿದರು.

‘ಬಾಲ್ಯದಿಂದಲೇ ನೀರಿನ ಮಿತಬಳಕೆ ಜಾಗೃತಿ ಮೂಡಿಸುವ ತುರ್ತು ಅಗತ್ಯ ಇದೆ. ಮಕ್ಕಳು ಮಳೆ ನೀರು ಸಂಗ್ರಹ, ಬಳಕೆ, ನೀರಿನ ಉಳಿತಾಯಕ್ಕೆ ಕೈಗೊಳ್ಳಬೇಕಿರುವ ಕ್ರಮ ಕುರಿತು ಹಲವು ರೀತಿಯ ಚಿತ್ರಗಳನ್ನು ಬಿಡಿಸುವ ಮೂಲಕ ನೋಡುಗರನ್ನು ಆಕರ್ಷಿಸುವಂತೆ ಮಾಡಿದ್ದಾರೆ. ಹತ್ತು ವಾಕ್ಯಗಳಲ್ಲಿ ಹೇಳುವ ವಿಷಯವನ್ನು ಒಂದು ಚಿತ್ರದ ಮೂಲಕ ಮನಮುಟ್ಟುವಂತೆ ಹೇಳುವ ಕೆಲಸ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos