ಐಟಿ ದಾಳಿಗೆ ನಾವು ಜಗ್ಗುವುದಿಲ್ಲ: ಸಿದ್ದು

ಐಟಿ ದಾಳಿಗೆ ನಾವು ಜಗ್ಗುವುದಿಲ್ಲ: ಸಿದ್ದು

ಬೆಂಗಳೂರು, ಅ. 10: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿ ಮುಂದುವರೆದಿದ್ದು, ಮಾಜಿ ಡಿಸಿಎಂ ಪರಮೇಶ್ವರ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆರ್. ಎಲ್.ಜಾಲಪ್ಪ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕರ ಮನೆ ಮೇಲಿನ ಐಟಿ ದಾಳಿಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.

ಟ್ವೀಟರ್ ನಲ್ಲಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ. ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ ನರೇಂದ್ರ ಮೋದಿ ಸರ್ಕಾರ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರ

ಟಿದೆ. ಇದಕ್ಕೆ ನಾವು ಜಗ್ಗುವುದಿಲ್ಲ ಎಂದು ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos