ಉಚಿತ ತರಬೇತಿಯನ್ನು ವಿಶ್ವವಿದ್ಯಾಲಯ! ಪರಿಶಿಷ್ಟ ಪಂಗಡಗಳ ಕಲ್ಯಾಣ

ಉಚಿತ ತರಬೇತಿಯನ್ನು ವಿಶ್ವವಿದ್ಯಾಲಯ! ಪರಿಶಿಷ್ಟ ಪಂಗಡಗಳ ಕಲ್ಯಾಣ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಗುರುವಾರ ಕೊಠಡಿ ಸಂಖ್ಯೆ 419, 4 ನೇ ಮಹಡಿ ವಿಕಾಸಸೌಧದ ಸಭಾಂಗಣದಲ್ಲಿ ನಡೆದ ರಾಜ್ಯ ಎನ್. ಎಸ್. ಎಸ್ ಕೋಶ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಡಾ. ರಾಜ್ ಕುಮಾರ್ ಅಕಾಡೆಮಿಯ ನಡುವೆ LEARNING APP ಮತ್ತು ಉಚಿತ ತರಬೇತಿಯನ್ನು ವಿಶ್ವವಿದ್ಯಾಲಯ ಮತ್ತು ನಿರ್ದೇಶನಾಲಯಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಒಡಂಬಡಿಕೆ (MOU) ಮಾಡಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಡಾ. ರಾಜಕುಮಾರ್ ಅಕಾಡೆಮಿಯ ಮುಖ್ಯಸ್ಥರಾದ ರಾಘವೇಂದ್ರ ರಾಜ್ ಕುಮಾರ್, ಗುರುರಾಜ್ ಕುಮಾರ್, ರೂಪಾಲಿಯವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ನಿರ್ದೇಶಕರಾದ ಕಾರ್ತಿಗೇಯನ್, ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸ್ ರವರು, ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos