ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಇದೀಗ ಬಾರಿ ಚರ್ಚೆಯಾಗುತ್ತಿದ್ದು ಶಕ್ತಿ ಯೋಜನೆಯನ್ನು ಪರಿಷ್ಕರಣೆ ಮಾಡಲಾಗುವುದು ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಇದೀಗ ರಾಜ್ಯ ರಾಜಕೀಯದಲ್ಲಿ ಅಲ್ಲೋಕಲ್ಲೋಲವೇ ಸೃಷ್ಟಿಸಿದೆ.
ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ಮಾಡಲಾಗುವುದು ಎಂದೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಹೇಳಿದ್ದರು.
ಆದರೆ ನಾವು ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ಪರಿಷ್ಕರಣೆ ಮಾಡುವುದಿಲ್ಲ ಎಂದು ಮತ್ತೆ ಇಂದು (ಗುರುವಾರ ಅಕ್ಟೋಬರ್ 31) ರಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಇದೀಗ ಡಿಸಿಎಂ ಅವರ ಹೇಳಿಕೆ ಕುರಿತಂತೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಇದಕ್ಕೆ ಕಾರಣ ಏನು ಎಂಬುದು ಇಲ್ಲಿಯವರೆಗೂ ತಿಳಿದು ಬಂದಿಲ್ಲ.
ಇನ್ನು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಮೇಲೆ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ ಎಂಬ ಮಾತು ಇದೀಗ ಮತ್ತೆ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಹೌದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಡಿಕೆ ನೋಡಿ ಗ್ಯಾರಂಟಿ ಬಗ್ಗೆ ನೀನೇನೋ ಹೇಳಿದ್ಯಲ್ಲಪ್ಪ ಎಂದು ಕೇಳಿದ್ದಾರೆ. ಇದಕ್ಕೆ ಡಿಕೆ ಶಿವಕುಮಾರ್, ನಾನು ಏನೂ ಹೇಳಿಲ್ಲ ಎಂದು ಕೈಸನ್ನೆ ಮಾಡಿದರು. ನೀನು ಪೇಪರ್ ನೋಡಿಲ್ಲಪ್ಪ, ನಾನು ನೋಡುತ್ತೇನೆ. ಪೇಪರ್ನಲ್ಲಿ ನೀನು ಹೇಳಿದ್ದೀಯಾ ಎಂದು ಬಂದಿದೆ ಎಂದು ಖರ್ಗೆ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇಲ್ಲ ಪರಿಷ್ಕರಣೆ ಅಂತ ಬಂದಿದೆ ಎಂದರು.
ಬಳಿಕ ಮಾತನಾಡಿದ ಖರ್ಗೆ, ಅದನ್ನೇ ಹೇಳ್ತಿರೋದು ನಾನು. ಬಜೆಟ್ನಲ್ಲಿ ಏನಿದೆ ಅದರಂತೆ ಗ್ಯಾರಂಟಿ ಯೋಜನೆ ಕೊಡಿ ಎಂದು ಸಿಎಂ, ಡಿಸಿಎಂಗೆ ಖಡಕ್ ಸೂಚನೆ ನೀಡಿದರು.
ಖರ್ಗೆ ಖಡಕ್ ಸೂಚನೆ ಬಳಿಕ ಡಿಕೆ ಶಿವಕುಮಾರ್ ತಮ್ಮ ವರಸೆಯನ್ನೇ ಬದಲಿಸಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಗ್ಯಾರಂಟಿ ಯೋಜನೆ ಪರಿಷ್ಕರಣೆ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆ ಇರುತ್ತದೆ. ರಾಜ್ಯದಲ್ಲಿ ಮುಂದಿನ ಬಾರಿಯೂ ನಮ್ಮ ಸರ್ಕಾರವೇ ಬರಲಿದೆ. ಹಾಗಾಗಿ ಇನ್ನೂ ಎಂಟೂವರೆ ವರ್ಷ ಗ್ಯಾರಂಟಿ ಯೋಜನೆ ಇರುತ್ತೆ ಎಂದು ಹೇಳಿದರು.