ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ದೇವರಾಜ್ ಗೌಡ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ದೇವರಾಜ್ ಗೌಡ ಹೇಳಿದ್ದೇನು?

ಹಾಸನ: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಚಿತ್ರೀಕರಣ ಕೇವಲ ರಾಜ್ಯ ಮಾತ್ರವಲ್ಲದೆ ಇಡೀ ದೇಶದಾದ್ಯಂತ ಸುದ್ದಿಯಾಗುತ್ತಿದ್ದು, ಪ್ರಜ್ವಲ್ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಚಿತ್ರೀಕರಣ ಸಾಮಾಜಿಕ ಜಾಲತಾಣದಲ್ಲಿ ಮೊದಲು ಯಾರು ವೈರಲ್ ಮಾಡಿದ್ದು, ಅದು ಯಾರಿಂದ ಯಾರಿಗೆ ತಲುಪಿತು ಎಂಬ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಇದರ ಬಗ್ಗೆ ಇಂಚಿಂಚಾಗಿ ಹೊಳೆನರಸಾಪುರ ವಿಧಾನಸಭಾ ಕ್ಷೇತ್ರದ ರಾಜಿತ ಬಿಜೆಪಿ ಅಭ್ಯರ್ಥಿ ವಕೀಲ ದೇವರಾಜ್ ಗೌಡ ಅವರು ಬಹಿರಂಗಪಡಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಡಿಯೋ ವಿಚಾರ 2023 ರಲ್ಲೇ ಬಂದಿತ್ತು. ಆದರೆ, ಪ್ರಜ್ವಲ್ ರೇವಣ್ಣ ನ್ಯಾಯಾಲಯದಲ್ಲಿ ಸ್ಟೇ ಪಡೆದುಕೊಂಡಿದ್ದರು. ಈ ಹಿಂದೆ ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಮೇಲೂ ಸ್ಟೇ ಪಡೆದಿದ್ದರು. ಈ ವೇಳೆ ಕಾರ್ತಿಕ್ ನನ್ನ ಬಳಿಗೆ ಬಂದು ವಕಾಲತ್ತು ಹಾಕಿ ಎಂದಿದ್ದ, ಈ ವೇಳೆ ಪ್ರಜ್ವಲ್ ರೇವಣ್ಣನ ವಿಡಿಯೋಗಳನ್ನು ನೋಡಿದ್ದೆ ಎಂದು ಎಳೆಎಳೆಯಾಗಿ ಮಾಹಿತಿ ನೀಡಿದರು.  ಇದನ್ನೂ ಓದಿ :ಪ್ರಜ್ವಲ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿ ಬಂಧನಕ್ಕೆ ಆಗ್ರಹಿಸಿದ ಎನ್‌ಸಿಡಬ್ಲ್ಯು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕಾರ್ತಿಕ್‌ ಬಂದು ನನ್ನ ಭೇಟಿ ಮಾಡಿದ ಸಂದರ್ಭದಲ್ಲಿ ಹಲವಾರು ಅಶ್ಲೀಲ ವೀಡಿಯೋ ಇತ್ತು. ಅದನ್ನು ನಾನು ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಸೇರಿ ಕೆಲ ಕಾಂಗ್ರೆಸ್ ನಾಯಕರಿಗೆ ಕಳುಹಿಸಿದೆ ಎಂದಿದ್ದಾರೆ.

ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರಿಗೆ ಪತ್ರ ಬರೆದು ಇ ಮೇಲ್ ಮಾಡಲಾಗಿತ್ತು. ಆದ್ರೆ ಇ ಮೇಲ್ ಡೆಲಿವರ್ ಆಗಿರಲಿಲ್ಲ. ನಂತರ ವಿಜೇಯೇಂದ್ರ ಅವರಿಗೂ ವಿಡಿಯೋ ಬಗ್ಗೆ ಪತ್ರ ಬರೆದು ಕಛೇರಿಗೆ ನೀಡಿದ್ದೆ. ಅವರು ಹೇಳಿದಂತೆ ಪತ್ರ ಅವರಿಗೂ ತಲುಪಿಲ್ಲ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos