ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್!

ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲಾರು ಹೆಚ್ಚಾಗಿ ಸೋಷಲ್‌ ಮೀಡಿಯಾಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿರುತ್ತಾರೆ ಹಾಗೂ ಅಡಿಕ್ಟ್‌ ಆಗಿರುತ್ತಾರೆ.  ವಾಟ್ಸ್​ಆ್ಯಪ್ ಬಳಕೆದಾರರ ದೂರುಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಪರಿಗಣಿಸಿ, ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಅಕೌಂಟ್ ಬ್ಯಾನ್ ಮಾಡುತ್ತಿದೆ. ಅದರಂತೆ ಇದೀಗ 75 ಲಕ್ಷ ಖಾತೆಗಳನ್ನು ಬ್ಯಾನ್ ಮಾಡುವ ನಿರ್ಧಾರವನ್ನು ವಾಟ್ಸ್​ಆ್ಯಪ್ ತೆಗೆದುಕೊಂಡಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈ ವರ್ಷದ ಅಕ್ಟೋಬರ್ 1 ರಿಂದ 31 ರ ನಡುವೆ ಒಟ್ಟು 7,548,000 ಖಾತೆಗಳನ್ನು ನಿಷೇಧಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 19,19,000 ಬಳಕೆದಾರರ ವರದಿಗಳ ನಂತರ ಈ ಖಾತೆಗಳನ್ನು ನಿಷೇಧಿಸುವ ನಿರ್ಧಾರವನ್ನು ವಾಟ್ಸ್​ಆ್ಯಪ್ ತೆಗೆದುಕೊಂಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos