ದೇಶದ ಜನತೆಗೆ ಅಚ್ಛಾದಿನ್ ಎಲ್ಲಿ ಬಂತ್ರಿ?: ಸಿಎಂ

ದೇಶದ ಜನತೆಗೆ ಅಚ್ಛಾದಿನ್ ಎಲ್ಲಿ ಬಂತ್ರಿ?: ಸಿಎಂ

ಮೈಸೂರು: ದೇಶದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದು 11 ವರ್ಷ ತುಂಬಿರುವುದು ಅಷ್ಟೇ, ಆದರೆ 11 ವರ್ಷದಿಂದ ಮೋದಿ ಸರ್ಕಾರದ ಕೊಡುಗೆ ಮಾತ್ರ ಕೇವಲ ಸೊನ್ನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೋದಿಯವರು ಅಧಿಕಾರಕ್ಕೆ ಬಂದಮೇಲೆ ದೇಶದ ಜನಕ್ಕೆ ಅಚ್ಛಾದಿನ್ ಆಯೇಗಾ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಹೇಳಿದ ನರೇಂದ್ರ ಮೋದಿಯವರು ಕೇವಲ ಪ್ರಚಾರಕ್ಕೋಸ್ಕರ ಬದುಕುತ್ತಿದ್ದಾರೆ ಎಂದು ಹೇಳಿದರು.

ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ, ಪ್ರತಿ ವರ್ಷ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ ಎಂದು ತಿಳಿಸಿದರು.

ಸುಳ್ಳು ವಿಚಾರಗಳಿಗೆ ಪ್ರಚಾರ

ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ  ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ, ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು ಎಂದರು. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು. ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿದರು.

ಇವರೇ ಪ್ರಧಾನಿಗಳಾದಾಗ ಏನು ಮಾಡಿದರು? ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ.  15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos