ಯಾರಿಗೆ ಕೆಪಿಸಿಸಿ ಗಾದಿ?

ಯಾರಿಗೆ ಕೆಪಿಸಿಸಿ ಗಾದಿ?

ಬೆಂಗಳೂರು, ಜ. 11 : ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಗಾದಿಗಾಗಿ ರಾಜಕೀಯ ಹಗ್ಗ ಜಗ್ಗಾಟ ಶುರುವಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಾರಥಿ ಯಾರು ಎನ್ನುವ ಯಕ್ಷ ಪ್ರಶ್ನೆಗೆ ಕಾಂಗ್ರೆಸ್ನ ಘಟಾನುಘಟಿಗಳಗೆ ತಲೆ ನೋವಾಗಿ ಪರಿಣಮಿಸಿದೆ. ರಾಜಕೀಯ ಲೆಕ್ಕಾಚಾರಗಳ ನಡುವೆಯೂ ಎಂ.ಬಿ.ಪಾಟೀಲ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣಕ್ಕೆ ಮತ್ತೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಕಾಂಗ್ರೆಸ್ ಇಬ್ಭಾಗವಾಗುವುದು ಖಚಿತ ಎಂದು ಮೂಲ ಕಾಂಗ್ರೆಸ್ಸಿಗರು ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಪಟ್ಟ ತಪ್ಪಿಸಲು ತೆರೆಮರೆಯಲ್ಲಿ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ.
ಕಾಂಗ್ರೆಸ್ಗೆ ತನ್ನ ಅಸ್ತಿತ್ವ ಕಾಪಾಡಿಕೊಳ್ಳುವುದೇ ಕಷ್ಟವಾಗಬಹುದು ಎಂಬ ಮಾಹಿತಿಯನ್ನು ಮೂಲಕಾಂಗ್ರೆಸ್ಸಿಗರು ಹೈಕಮಾಂಡ್ಗೆ ರವಾನಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ಕಾರಣಕ್ಕಾಗಿ ಈಗಾಗಲೇ ಸಾಕಷ್ಟು ಮಂದಿ ಉತ್ಸಾಹದಲ್ಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos