ಕನ್ನಡಿಗನ ಕೈ ತಪ್ಪಿದ ವಿಕೆಟ್ ಕೀಪಿಂಗ್..!

ಕನ್ನಡಿಗನ ಕೈ ತಪ್ಪಿದ ವಿಕೆಟ್ ಕೀಪಿಂಗ್..!

ಬೆಂಗಳೂರು: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಕೆಳಗಿಳಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ರಾಹುಲ್ ಕೇವಲ ಬ್ಯಾಟರ್ ಆಗಿ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಇದಾಗ್ಯೂ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಿರಲಿಲ್ಲ. ಬದಲಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ವಿಕೆಟ್ ಕೀಪರ್ ಬ್ಯಾಟರ್ ಕೋಟಾದಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಕೆಎಲ್ ರಾಹುಲ್ ಅವರನ್ನು ಕೇವಲ ಬ್ಯಾಟರ್ ಆಗಿ ಪರಿಗಣಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos