ಮುಂಬೈ ಇಂಡಿಯನ್ಸ್​ಗೆ ರೋಚಕ ಜಯ

ಮುಂಬೈ ಇಂಡಿಯನ್ಸ್​ಗೆ ರೋಚಕ ಜಯ

ಬೆಂಗಳೂರು: ಮಹಿಳಾ ಕ್ರಿಕೆಟಿಗರ ವರ್ಣರಂಜಿತ ಟಿ20 ಕ್ರಿಕೆಟ್​ ಲೀಗ್ WPL 2024 2ನೇ ಆವೃತ್ತಿಗೆ ಚಾಲನೆ ಸಿಕ್ಕಿತ್ತು. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಯಿತ್ತು.

ಒಟ್ಟು 24 ದಿನಗಳ ಕಾಲ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂದು ಹರ್ಮನ್​ಪ್ರಿತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಮುಖಾಮುಖಿ ಆಗಲಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಿತ್ತು.. ಈ ಪಂದ್ಯ ಆರಂಭಕ್ಕೂ ಮುನ್ನ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು. ಇದರಲ್ಲಿ ಶಾಹಿದ್ ಕಪೂರ್, ಶಾರುಖ್ ಖಾನ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಅಭಿಮಾನಿಗಳನ್ನು ರಂಜಿಸಿದ್ದರು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ರೋಚಕ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ (1) ಶಬ್ನಿಮ್ ಇಸ್ಮಾಯಿಲ್ ಎಸೆದ ಮೊದಲ ಓವರ್​ನಲ್ಲೇ ಕ್ಲೀನ್ ಬೌಲ್ಡ್ ಆಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಅಲೀಸ್ ಕ್ಯಾಪ್ಟಿ ಅರ್ಧಶತಕದ ಜೊತೆಯಾಟವಾಡಿದರು.

ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಬಿರುಸಿನ ಜೊತೆಯಾಟವಾಡಿದ ಕ್ಯಾಪ್ಸಿ 53 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 75 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಸ್ಪೋಟಕ ಇನಿಂಗ್ಸ್ ಆಡಿದ ಜೆಮಿಮಾ ಕೇವಲ 24 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 42 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 171 ರನ್ ಕಲೆಹಾಕಿತು.

ಈ ಬೃಹತ್ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯಶಸ್ವಿಯಾಯಿತು.  ಇದರ ಬೆನ್ನಲ್ಲೇ ಸ್ಕೀವರ್ ಬ್ರಂಟ್ (19) ಅರುಂಧತಿ ರೆಡ್ಡಿ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾಗ್ಯೂ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಯಾಸ್ತಿಕಾ ಭಾಟಿಯಾ 45 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 57 ರನ್ ಬಾರಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕಿ ಹರ್ಮನ್​ಪ್ರೀತ್ ಕೌರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಕೌರ್ ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 55 ರನ್ ಬಾರಿಸಿದರು.

ಪರಿಣಾಮ ಕೊನೆಯ ಓವರ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ 12 ರನ್​ಗಳ ಅವಶ್ಯಕತೆಯಿತ್ತು. ಅಲೀಸ್ ಕ್ಯಾಪ್ಟಿ ಎಸೆದ ಅಂತಿಮ ಓವರ್​ನ ಮೊದಲ ಎಸೆತದಲ್ಲಿ ಪೂಜಾ ವಸ್ತ್ರಾಕರ್ ಕ್ಯಾಚ್ ನೀಡಿ ಔಟಾದರು.

ನಾಲ್ಕನೇ ಎಸೆತವನ್ನು ಎದುರಿಸಿದ ಹರ್ಮನ್​ಪ್ರೀತ್ ಕೌರ್ ಫೋರ್ ಬಾರಿಸಿದರು. ಐದನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು. ಕೊನೆಯ ಎಸೆತದಲ್ಲಿ 5 ರನ್​ಗಳು ಬೇಕಿತ್ತು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಸಂಜನಾ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮುಂಬೈ ಇಂಡಿಯನ್ಸ್​ಗೆ ರೋಚಕ ಜಯ ತಂದುಕೊಟ್ಟರು. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-2 ರ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು 4 ವಿಕೆಟ್​ಗಳ ಜಯ ಸಾಧಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos