ನಾಳೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸ್ತೆವೆ :ಸಿಎಂ

ನಾಳೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸ್ತೆವೆ :ಸಿಎಂ

ನವದೆಹಲಿ, ಸೆ. 20: ಕಾವೇರಿ ನದಿಯಲ್ಲಿ ನೀರು ಇಲ್ಲವೆಂದು ನಾಳೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಯಲ್ಲಿ ಇಂದು ನಡೆದ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಮಳೆ ಕೊರತೆಯಿಂದ ನಾವು ಕಷ್ಟದಲ್ಲಿ ಇದ್ದೇವೆ.ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ಸಮಯ ಕೇಳಲಾಗಿದೆ ಎಂದರು.

ನಮ್ಮ ರಾಜ್ಯದಲ್ಲಿ ರೈತರು ಹಾಗೂ ಕುಡಿಯಲು 106 TMC ನೀರು ಬೇಕು. ಈಗ ಪ್ರಸ್ತುತ 51 TMC ಇದೆ. ನಾವು ನೀರಿಲ್ಲದೇ ಕಷ್ಟದಲ್ಲಿದ್ದೇವೆ. ರಾಜ್ಯದಲ್ಲಿ ಮಳೆ ಕೊರತೆಯಿಂದ ಡ್ಯಾಮ್ಗಳಲ್ಲಿ ನೀರು ಇಲ್ಲ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ.

ಕಾವೇರಿ ನೀರು ವಿವಾದದಲ್ಲಿ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ನಾನು ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸಮಯ ಕೇಳಿದ್ದೇನೆ.
ನಮಗೆ ಕುಡಿಯುವ ನೀರು, ಬೆಳೆ ರಕ್ಷಣೆ, ಕೈಗಾರಿಕೆಗೂ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ. CWMA, CWRA ಮುಂದೆ ಸಮರ್ಥವಾಗಿ ನಮ್ಮ ವಾಸ್ತವ ಪರಿಸ್ಥಿತಿಯನ್ನು ಮಂಡಿಸಿದ್ದೇವೆ. ಒಟ್ಟು ಮೂರು ಬಾರಿ ಸರ್ವ ಪಕ್ಷ ಸಭೆ ನಡೆಸಿದ್ದೇವೆ. 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿಲ್ಲ ಎಂದು CWMA ಮುಂದೆಯೂ ಮನವಿ ಸಲ್ಲಿಸಲಿದ್ದೇವೆ, ತಮಿಳುನಾಡು ವಾದ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ನಮ್ಮ ತಕರಾರು ಮಂಡಿಸಿದ್ದೇವೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos