ಬೆಂಗಳೂರು, ನ.21 : ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿ ಉರಿದ ಪರಿಣಾಮ ಮಹಿಳೆ ಮೃತಪಟ್ಟು ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಂದ್ರಲೇಔಟ್ ಠಾಣಾ ವ್ಯಾಪ್ತಿಯ ಮಾರುತಿ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ.
ನಾಗರಬಾವಿ ಮಾರುತಿನಗರದ ಚಿತ್ರಾವತಿ (52) ಮೃತ ಮಹಿಳೆ. ಅವರ ತಾಯಿ ಸತ್ಯಪ್ರೇಮ (75) ಮತ್ತು ಸಹೋದರ ಗುರುಮೂರ್ತಿ ಅವರ ಸ್ಥಿತಿ ಗಂಭೀರವಾಗಿದ್ದು, ತಂದೆ ಲಕ್ಷ್ಮೀನಾರಾಯಣ ರಾವ್ (88) ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ‘ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಅನಿಲ ಸೋರಿಕೆ ಆಗಿರುವುದನ್ನು ಗಮನಿಸದೆ ಸ್ಟೌ ಹಚ್ಚಿದ ಪರಿಣಾಮ ಈ ದುರಂತ ಸಂಭವಿಸಿದೆ’ ಎಂದು ಚಂದ್ರಲೇಔಟ್ ಠಾಣೆಯ ಪೊಲೀಸರು ತಿಳಿಸಿದರು.