ಸೇತುವೆಯಿಂದ ಬಿದ್ದ ಕಾರು, ಮಹಿಳೆ ಸಾವು

ಸೇತುವೆಯಿಂದ ಬಿದ್ದ ಕಾರು, ಮಹಿಳೆ ಸಾವು

ಹೈದರಾಬಾದ್, ನ. 24 : ಮೇಲು ಸೇತುವೆ ಮೇಲೆ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕೆಳಗೆ ಜನರ ಮೇಲೆ ಬಿದ್ದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೈದರಾಬಾದ್ ನ ಬಯೋ ಡೈವರ್ಸಿಟಿ ಜಂಕ್ಷನ್ ಬಳಿಕ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos