ಆಸ್ಪತ್ರೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ

  • In Cinema
  • July 10, 2021
  • 168 Views
ಆಸ್ಪತ್ರೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ

ಮೈಸೂರು : ಜಿಲ್ಲೆಯ ಕೆ.ಆರ್ ಆಸ್ಪತ್ರೆಯಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಆಸ್ಪತ್ರೆಯ ಕಿಟಕಿ ಕಿತ್ತು ವಾರ್ಡ್ವೊಳಗೆ ನುಗ್ಗಿದ ವ್ಯಕ್ತಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ. ಈ ಬಗ್ಗೆ ಅದೇ ವಾರ್ಡ್ನಲ್ಲಿದ್ದ ವೃದ್ಧೆಯೊಬ್ಬರು ಮಾಹಿತಿ ನೀಡಿದ್ದಾರೆ.
ಅತ್ಯಾಚಾರದ ಬಗ್ಗೆ ವಾರದ ಹಿಂದೆಯೇ ವೃದ್ಧೆ ವೈದ್ಯರಿಗೆ ಮಾಹಿತಿ ನೀಡಿದ್ದು, ಈ ವಿಚಾರ ಎಲ್ಲೂ ಬಾಯಿ ಬಿಡದಂತೆ ವೃದ್ಧೆಯ ಮೇಲೆ ಆಸ್ಪತ್ರೆ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ.
ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಪ್ರಕರಣ ಬೆಳಕಿಗೆ ಬಂದಿದ್ದು, ದೇವರಾಜ ಪೊಲೀಸ್ ಠಾಣೆ ಪೊಲೀಸರು ಘಟನಾ ಸ್ಥಳಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿ ಪರಾರಿಯಾಗಿದ್ದಾರೆ.

ಇನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದರೂ ಕೂಡ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos