ಗಣೇಶ ಮೂರ್ತಿಯನ್ನು ಭಗ್ನಗೊಳಿಸಿದ

ಗಣೇಶ ಮೂರ್ತಿಯನ್ನು ಭಗ್ನಗೊಳಿಸಿದ

ಮನಾಮ: ಮಹಿಳೆಯೊಬ್ಬರು ಗಣೇಶ ಮೂರ್ತಿಯನ್ನು ಉದ್ದೇಶಪೂರ್ವಕವಾಗಿ ಹಾನಿಗೊಳಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಕಾರಣ ಆ ಮಹಿಳೆಗೆ ನ್ಯಾಯಾಲಯ ಸಮನ್ಸ್ ನೀಡಲಾಗಿದೆ.

ಮಹಿಳೆಯು ಗಣೇಶ ಮೂರ್ತಿಯನ್ನು ಭಗ್ನಗೊಳಿಸಿದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇವರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಈ ಮಹಿಳೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos