ಸೌತ್ ಆಫ್ರಿಕಾ ತಂಡವು ಆಮೋಘ ಗೆಲುವು

ಸೌತ್ ಆಫ್ರಿಕಾ ತಂಡವು ಆಮೋಘ ಗೆಲುವು

ಬೆಂಗಳೂರು: ಏಕದಿನ ವಿಶ್ವಕಪ್ ಟೂರ್ನಿ ಆರಂಭವಾಗಿ ಎಲ್ಲಾ ತಂಡಗಳು ನಾಲ್ಕು ನಾಲ್ಕು ಪಂದ್ಯಗಳನ್ನು ಆಡಿದ್ದಾರೆ. ಸೌತ್ ಆಫ್ರಿಕಾ ತಂಡವು ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಭರ್ಜರಿಯಾಗಿ ಗೆಲುವು ಸಾಧಿಸಿತ್ತು.

ಏಕದಿನ ವಿಶ್ವಕಪ್ನ 23ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಸೌತ್ ಆಫ್ರಿಕಾ ಭರ್ಜರಿ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ಹಂಗಾಮಿ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ (174) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.

ಈ ಶತಕದ ನೆರವಿನಿಂದ ಸೌತ್ ಆಫ್ರಿಕಾ ತಂಡ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 382 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಪರ ಮಹಮ್ಮದುಲ್ಲಾ (111) ಶತಕ ಬಾರಿಸಿದರೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಂತಿಮವಾಗಿ ಬಾಂಗ್ಲಾದೇಶ್ ತಂಡವು 46.4 ಓವರ್ಗಳಲ್ಲಿ 233 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು 149 ರನ್ಗಳ ಆಮೋಘ ಗೆಲುವು ದಾಖಲಿಸಿತು.

ಫ್ರೆಶ್ ನ್ಯೂಸ್

Latest Posts

Featured Videos