ಆರ್ಥಿಕವಾಗಿ ಹಿಂದುಳಿದವರ ಪರ ಕಾರ್ಯ ನಿರ್ವಹಿಸಿ

ಆರ್ಥಿಕವಾಗಿ ಹಿಂದುಳಿದವರ ಪರ ಕಾರ್ಯ ನಿರ್ವಹಿಸಿ

ಗದಗ: ಬಡತನ ನಿರ್ಮೂಲನಾ ಯೋಜನೆಗಳು ಪ್ರತಿ ಬಡವರಿಗೆ ತಲುಪುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು, ಆರ್ಥಿಕವಾಗಿ ಹಿಂದುಳಿದವರ ಪರ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜಶೇಖರ ವೆಂಕನಗೌಡ ಪಾಟೀಲ ಹೇಳಿದರು.
ಗದಗ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಬಡತನ ನಿರ್ಮೂಲನಾ ಯೋಜನೆ ಪರಿಣಾಮಕಾರಿ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಡತನ ನಿರ್ಮೂಲನೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿ ಹೋಬಳಿಗೂ ಈ ಯೋಜನೆಗಳು ತಲುಪಬೇಕು. ಅರ್ಹ ಫಲಾನುಭವಿಗಳಿಗೆ ಸಪರ್ಪಕವಾಗಿ ಯೋಜನೆಗಳು ತಲುಪಲಿ ಎಂದು ಹೇಳಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ಮಾತನಾಡಿ, ಬಡತನ ಒಂದೇ ರೀತಿಯಲ್ಲಿ ಇರುವುದಿಲ್ಲ. ಸಂಪಾದನೆಯ ಮೇಲೆ ಬಡತನ ಮಟ್ಟವನ್ನು ಅಳೆಯಲಾಗದು. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos