ವಿಶ್ವಕಪ್: ಇಂದು ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾ ಮುಖಾಮುಖಿ

ವಿಶ್ವಕಪ್: ಇಂದು ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾ ಮುಖಾಮುಖಿ

ವಿಶ್ವಕಪ್ 2019 ಟೂರ್ನಿಯ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.

ಆಡಿರುವ 5 ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಗೆದ್ದು, ಮತ್ತೊಂದು ಪಂದ್ಯ ರದ್ದಾಗಿ 3 ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಸೋತರೆ ಬಹುತೇಕ ವಿಶ್ವಕಪ್ ಹಾದಿ ಅಂತ್ಯವಾಗುವ ಸಾಧ್ಯತೆ ಇದೆ.

ಇನ್ನು ನ್ಯೂಜಿಲೆಂಡ್ ತಂಡ ಆಡಿರುವ 4 ಪಂದ್ಯಗಳಲ್ಲಿ 1 ಪಂದ್ಯ ರದ್ದಾಗಿ 3 ಗೆದ್ದಿದ್ದು, ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಕಿವೀಸ್ ಪರ ಮ್ಯಾಟ್ ಹೆನ್ರಿ, ಟ್ರೆಂಟ್ ಬೋಲ್ಸ್, ಲ್ಯೂಕಿ ಫರ್ಗುಸನ್, ಜೇಮ್ಸ್ ನಿಶಾಮ್ ಬೌಲಿಂಗ್ ನಲ್ಲಿ ಮಿಂಚುತ್ತಿದ್ದು, ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos