ಮಹಿಳಾ ಪ್ರೀಮಿಯರ್ ಲೀಗ್​ಗೆ ಇಂದು ಅದ್ದೂರಿ ಚಾಲನೆ

ಮಹಿಳಾ ಪ್ರೀಮಿಯರ್ ಲೀಗ್​ಗೆ ಇಂದು ಅದ್ದೂರಿ ಚಾಲನೆ

ಬೆಂಗಳೂರು: ಮಹಿಳಾ ಕ್ರಿಕೆಟಿಗರ ವರ್ಣರಂಜಿತ ಟಿ20 ಕ್ರಿಕೆಟ್​ ಲೀಗ್ WPL 2024 2ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಂದು ಸಾಕ್ಷಿಯಾಗಲಿದೆ.

ಎರಡನೇ ಆವೃತ್ತಿಯ ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೆ ಇಂದು ಅದ್ದೂರಿ ಚಾಲನೆ ಸಿಗಲಿದೆ. ಒಟ್ಟು 24 ದಿನಗಳ ಕಾಲ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂದು ಹರ್ಮನ್​ಪ್ರಿತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಮುಖಾಮುಖಿ ಆಗಲಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈ ಪಂದ್ಯ ಆರಂಭಕ್ಕೂ ಮುನ್ನ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದರಲ್ಲಿ ಶಾಹಿದ್ ಕಪೂರ್, ಶಾರುಖ್ ಖಾನ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಅಭಿಮಾನಿಗಳನ್ನು ರಂಚಿಸಲಿದ್ದಾರೆ.

ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರ್ತಿಯರ ದಂಡೇ ಇದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ.  ಚಿಕ್ಕ ಬೌಂಡರಿಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಎತ್ತರವು ಸೀಮಿತ-ಓವರ್‌ಗಳ ಸ್ವರೂಪಗಳಲ್ಲಿ ಬ್ಯಾಟರ್‌ಗಳಿಗೆ ಸ್ವರ್ಗವಾಗಿದೆ. ಈ ಮೈದಾನದಲ್ಲಿ ಸುಲಭವಾಗಿ ದೊಡ್ಡ ಸ್ಕೋರ್‌ಗಳನ್ನು ಕಲೆಹಾಕಬಹುದು. ಚೇಸಿಂಗ್ ಕೂಡ ದೊಡ್ಡ ಕಷ್ಟವೇನಲ್ಲ. ಇಲ್ಲಿ ಈ ಹಿಂದೆ ನಡೆದ ಐಪಿಎಲ್ ಪಂದ್ಯಗಳಲ್ಲಿ ಕೂಡ ರನ್ ಮಳೆ ಸುರಿದಿತ್ತು.

ಮಹಿಳಾ ಪ್ರೀಮಿಯರ್ ಲೀಗ್​ನ ಮುಂಬೈ-ಡೆಲ್ಲಿ ನಡುವಣ ಮೊದಲ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಸಂಜೆ ಸುಮಾರು 6.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos