ಯಡಿಯೂರಪ್ಪ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ

ಯಡಿಯೂರಪ್ಪ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ

ಬೆಂಗಳೂರು, ಜು. 24 : ತಾಳ್ಮೆ, ದೃಢ ನಿರ್ಧಾರದಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷ, ಬಿ.ಎಸ್ ಯಡಿಯೂರಪ್ಪ ಅವರು ತಮ್ಮ 7ನೇ ಪ್ರಯತ್ನದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ 15 ತಿಂಗಳಲ್ಲಿ ಲಿಂಗಾಯತ ಪ್ರಬಲ ನಾಯಕನಾಗಿರುವ ಯಡಿಯೂರಪ್ಪ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಮೊದಲು ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದು, ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ಬಳಿಕವಷ್ಟೇ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಪಕ್ಷೇತರ ಶಾಸಕರಿಬ್ಬರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos