ಯಶ್ ಅಭಿಮಾನಿಗಳಿಗೆ ಖುಷಿ ಸುದ್ದಿ

ಯಶ್ ಅಭಿಮಾನಿಗಳಿಗೆ ಖುಷಿ ಸುದ್ದಿ

ಬೆಂಗಳೂರು, ಮಾ. 13, ನ್ಯೂಸ್ ಎಕ್ಸ್ ಪ್ರೆಸ್: ನಮ್ಮೆಲ್ಲರ ಪ್ರೀತಿಯ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಭಾಗ 1 ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಯಶಸ್ಸು ಕಂಡಿತ್ತು. ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಗಳಿಕೆಯಲ್ಲಿಯೂ ದಾಖಲೆ ಮೇಲೆ ದಾಖಲೆ ಬರೆದಿತ್ತು.

ಇದರ ಮುಂದುವರೆದ ಭಾಗ ‘ಕೆಜಿಎಫ್ 2’ ಸದ್ದಿಲ್ಲದೆ ಚಿತ್ರದ ಮುಹೂರ್ತ ನೆರವೇರಿಸಲಾಗಿದೆ. ಬೆಂಗಳೂರು ವಿಜಯನಗರದ ಕೋದಂಡ ರಾಮಸ್ವಾಮಿ ದೇವಸ್ಥಾನದಲ್ಲಿ ಸರಳವಾಗಿ ಪೂಜೆ ನೆರವೇರಿಸಿ ಚಿತ್ರಕ್ಕೆ ಚಾಲನೆ ನೀಡಲಾಗಿದೆ.

ನಟ ರಾಕಿಂಗ್ ಸ್ಟಾರ್ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್ ಸೇರಿದಂತೆ ಚಿತ್ರ ತಂಡದವರು ಮುಹೂರ್ತದ ಸಂದರ್ಭದಲ್ಲಿ ಭಾಗವಹಿಸಿದ್ದಾರೆ. ‘ಕೆಜಿಎಫ್ 2’ನಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್ ಕೂಡ ನಟಿಸಲಿದ್ದಾರೆ ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos