ಈ ವರ್ಷ ಹುಟ್ಟು ಹಬ್ಬಕ್ಕೂ ಸಿಗಲ್ಲಾ ಯಶ್!

ಈ ವರ್ಷ ಹುಟ್ಟು ಹಬ್ಬಕ್ಕೂ ಸಿಗಲ್ಲಾ ಯಶ್!

ಬೆಂಗಳೂರು: ನಮ್ಮ ಸ್ಯಾಂಡಲ್‌ ವುಡ್‌ ನಲ್ಲಿ ಕೆಜಿಎಫ್‌ ರಿಲೀಸ್‌ ಆದ ಬಳಿಕ ಯಶ್‌ ಅವರು ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿದ್ದಾರೆ. ಹಲವು ವರ್ಷ ಕಾಯಿಸಿದ ಬಳಿಕ ಇತ್ತೀಚೆಗಷ್ಟೆ ನಟ ಯಶ್ ತಮ್ಮ ಹೊಸ ಸಿನಿಮಾದ ಘೋಷಣೆ ಮಾಡಿದ್ದಾರೆ ಯಶ್ ಹುಟ್ಟುಹಬ್ಬ ಹತ್ತಿರವಾಗಿದ್ದು, ಈ ಬಾರಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ತಯಾರಾಗಿದ್ದಾರೆ. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ.

ನನಗೂ ಅಷ್ಟೇ, ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ, ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ, ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ, ನನ್ನ ಅನುಪಸ್ಥಿತಿಯನ್ನು, ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ’ ಎಂದಿದ್ದಾರೆ ಯಶ್.

 

ಫ್ರೆಶ್ ನ್ಯೂಸ್

Latest Posts

Featured Videos