ಯತ್ನಾಳ್ ವಿರುದ್ಧ ‘FIR’ ದಾಖಲು

ಯತ್ನಾಳ್ ವಿರುದ್ಧ ‘FIR’ ದಾಖಲು

ಕಲಬುರಗಿ: ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ. ಕಲಬುರಗಿ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಚುನಾವಣಾಧಿಕಾರಿಗಳು ನೀಡಿದ ದೂರಿನ್ವಯ ಎಫ್ ಐಆರ್ ದಾಖಲಾಗಿದೆ.

ಕಲಬುರಗಿಯ ಗಂಜ್ ಕಾಲೋನಿಯಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ನಿಮ್ಮ ಏರಿಯಾಗೆ ಅವರು ಬಂದಾಗ ಕಲ್ಲಿನಿಂದ ಹೊಡೆಯಿರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಚುನಾವಾಣಾಧಿಕಾರಿಗಳು ದೂರು ದಾಖಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos