ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಸಿಡಿದೆದ್ದ ಯತ್ನಾಳ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಸಿಡಿದೆದ್ದ ಯತ್ನಾಳ್

ಬೆಳಗಾವಿ: ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದೆ . ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಸಮಾಧಾನ ಕಡಿಮೆಯಾದಂತೆ ಕಾಣುತ್ತಿಲ್ಲ. ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕು ಎಂದು ತಮ್ಮ ಆಗ್ರಹವನ್ನು ಮುಂದುವರಿಸಿದ್ದಾರೆ.  “ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಒಳಗಾಗುವುದಿಲ್ಲ. ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ” ಎಂದು ಕಡ್ಡಿ ಮುರಿದಂತೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos