ಎತ್ತಿನಗಾಡಿಯಲ್ಲಿ ಚಿಲ್ಲರೆ ನಾಣ್ಯಗಳ ಮೂಟೆ ಹಾಕಿಕೊಂಡು ಬಂದು ನಾಮಪತ್ರ ಸಲ್ಲಿಸಿದ ಈ ಅಭ್ಯರ್ಥಿ

ಎತ್ತಿನಗಾಡಿಯಲ್ಲಿ ಚಿಲ್ಲರೆ ನಾಣ್ಯಗಳ ಮೂಟೆ ಹಾಕಿಕೊಂಡು ಬಂದು ನಾಮಪತ್ರ ಸಲ್ಲಿಸಿದ ಈ ಅಭ್ಯರ್ಥಿ

ಶಿವಮೊಗ್ಗ, ಏ. 4, ನ್ಯೂಸ್ ಎಕ್ಸ್ ಪ್ರೆಸ್:  ವಿನಯ್ ರಜಾವತ್ ಈ ಬಾರಿ ಕೂಡ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು, ಅವರು ಈ ಬಾರಿ ವಿಶೇಷವಾಗಿ ಎಲ್ಲರ ಗಮನ ಸೆಳೆದಿದ್ದಾರೆ.

ಹೌದು, ಅವರು ಕಳೆದ ಬಾರಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಲು ಬೆಂಗಳೂರಿನಿಂದ ಹೆಲಿಕಾಫ್ಟರ್ ನಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ಈ ಬಾರಿ ಅವರು ಎತ್ತಿನಗಾಡಿಯಲ್ಲಿ ಚಿಲ್ಲರೆ ನಾಣ್ಯಗಳ ಮೂಟೆ ಹಾಕಿಕೊಂಡು ಬಂದು ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ವಿನಯ್ ರಜಾವತ್ ಅವರಿವರಿಂದ 1 ಹಾಗೂ 2 ರೂಪಾಯಿ ನಾಣ್ಯ ಸಂಗ್ರಹ ಮಾಡಿದ್ದರು. ಇದೇ ಹಣದಲ್ಲಿ ಹನ್ನೆರಡೂವರೆ ಸಾವಿರ ರೂಪಾಯಿ ಠೇವಣಿ ಕಟ್ಟಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos