ಯೋಧರ ಗುಂಡಿಗೆ 2 ಉಗ್ರರು ಬಲಿ.!

ಯೋಧರ ಗುಂಡಿಗೆ 2 ಉಗ್ರರು ಬಲಿ.!

ಕುಲ್ಗಾಮ್, ಮೇ. 22, ನ್ಯೂಸ್ ಎಕ್ಸ್ ಪ್ರೆಸ್: ಜಮ್ಮು- ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲಪೊರ ಗ್ರಾಮದಲ್ಲಿ ಇಂದು ಮುಂಜಾನೆ ಸೇನೆ ಹಾಗೂ ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆದಿದೆ. ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದ ಸೇನೆ 2 ಉಗ್ರರನ್ನು ಹೊಡೆದುರುಳಿಸುವಲ್ಲಿ ಸಫಲವಾಗಿದೆ.

ಭಾರತೀಯ ಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ 2 ಉಗ್ರರು ಬಲಿಯಾದ ಘಟನೆ ನಡೆದಿದೆ.

ಉಗ್ರರು ಅಡಗಿರುವ ಬಗ್ಗೆ ಸ್ಪಷ್ಟ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸೇನೆ ಕಾರ್ಯಾಚರಣೆಗೆ ಇಳಿದಿತ್ತು. ಸದ್ಯ ಸೇನೆ ದಾಳಿಗೆ ಬಲಿಯಾಗಿರುವ ಉಗ್ರರ ಗುರುತು ಇನ್ನೂ ತಿಳಿದು ಬಂದಿಲ್ಲ ಎಂದು ಸೇನೆ ಹೇಳಿದೆ. ಮೂಲಗಳ ಪ್ರಕಾರ ಸತ್ತಿರುವ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos