30 ನೇ ವಸಂತಕ್ಕೆ ಕಾಲಿಟ್ಟ ಯಾರ್ಕರ್ ಕಿಂಗ್!

30 ನೇ ವಸಂತಕ್ಕೆ ಕಾಲಿಟ್ಟ ಯಾರ್ಕರ್ ಕಿಂಗ್!

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಇಂದು ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಚಾಣಾಕ್ಯ ಬೌಲಿಂಗ್​ನಿಂದ ಬುಮ್ರಾ ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಟೀಂ ಇಂಡಿಯಾದಲ್ಲಿ ಮಾತ್ರವಲ್ಲದೆ ವಿಶ್ವ ಕ್ರಿಕೆಟ್‌ನಲ್ಲಿಯೂ ಸಾಕಷ್ಟು ಹೆಸರು ಸಂಪಾಧಿಸಿದ್ದಾರೆ.

ಅತಿ ಕಡಿಮೆ ಸಮಯದಲ್ಲಿ ಭಾರತ ತಂಡದ ಪ್ರಮುಖ ಬೌಲರ್ ಎಂದು ಗುರುತಿಸಿಕೊಂಡ ಬುಮ್ರಾ, ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ನಲ್ಲಿ 11 ಪಂದ್ಯಗಳನ್ನಾಡಿ 20 ವಿಕೆಟ್‌ಗಳನ್ನು ಗಳಿಸಿದ್ದರು. ಹಾಗೆಯೇ ಭಾರತವನ್ನು ಫೈನಲ್​ಗೆ ಕೊಂಡೊಯ್ಯುವಲ್ಲು ಪ್ರಮುಖ ಪಾತ್ರವಹಿಸಿದ್ದರು.

ಜಸ್ಪ್ರೀತ್ ಬುಮ್ರಾ ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಇದರಲ್ಲಿ ಬುಮ್ರಾ ಸತತ ಮೂರು ಎಸೆತಗಳಲ್ಲಿ ಡ್ಯಾರೆನ್ ಬ್ರಾವೋ, ಶಮ್ರಾ ಬ್ರೂಕ್ಸ್ ಮತ್ತು ರೋಸ್ಟನ್ ಚೇಸ್ ಅವರನ್ನು ಬಲಿಪಶುಗಳನ್ನಾಗಿ ಮಾಡಿದರು. ವೇಗದ ಬೌಲರ್ ಮಾತ್ರವಲ್ಲದೆ, ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ಯಾಟ್‌ನಿಂದ ಕೂಡ ದಾಖಲೆ ನಿರ್ಮಿಸಿದ್ದಾರೆ.

2022 ರಲ್ಲಿ, ಬರ್ಮಿಂಗ್ಹ್ಯಾಮ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಬುಮ್ರಾ, ಸ್ಟುವರ್ಟ್ ಬ್ರಾಡ್ ಬೌಲ್ ಮಾಡಿದ ಒಂದು ಓವರ್‌ನಲ್ಲಿ ಬರೋಬ್ಬರಿ 35 ರನ್ ಚಚ್ಚಿದ್ದರು. ಇದು ಇಲ್ಲಿಯವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ಓವರ್‌ನಲ್ಲಿ ಹೆಚ್ಚು ರನ್ ಗಳಿಸಿದ ದಾಖಲೆಯಾಗಿದೆ.

ಇದಲ್ಲದೆ, ಬುಮ್ರಾ ಅವರು ಭಾರತೀಯ ಬೌಲರ್ ಆಗಿ ತಮ್ಮ ಟೆಸ್ಟ್ ಚೊಚ್ಚಲ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆಯುವ ವಿಷಯದಲ್ಲಿ ನಂಬರ್-1 ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos