ಯುವ ಸಮುದಾಯದ ಭವಿಷ್ಯ ನಿರ್ಧರಿಸುವ ಚುನಾವಣೆ ಇದು: ಡಿಸಿಎಂ ಡಾ.ಜಿ. ಪರಮೇಶ್ವರ

ಯುವ ಸಮುದಾಯದ ಭವಿಷ್ಯ ನಿರ್ಧರಿಸುವ ಚುನಾವಣೆ ಇದು: ಡಿಸಿಎಂ ಡಾ.ಜಿ. ಪರಮೇಶ್ವರ

ಬೆಂಗಳೂರು, ಏ. 4, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿರು ಲೋಕಸಭಾ ಚುನಾವಣಡಯು ಕೇವಲ ಬಿಜೆಪಿ-ಕಾಂಗ್ರೆಸ್ ನಡುವಿನ ಚುನಾವಣಾ ಹೋರಾಟ ಅಲ್ಲ, ದೇಶದ, ಯುವ ಸಮುದಾಯದ ಭವಿಷ್ಯ ನಿರ್ಧರಿಸುವ ಚುನಾವಣೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಭೈರೇಗೌಡ ಅವರ ಪರವಾಗಿ ಕಮ್ಮಗೊಂಡನಹಳ್ಳಿಯಲ್ಲಿ ರೋಡ್ ಶೋನಲ್ಲಿ ಮಾತನಾಡಿದ ಅವರು,

ಸೈದ್ದಾಂತಿಕವಾಗಿ ಜೆಡಿಎಸ್ 2 ಪಕ್ಷಗಳು ಒಂದೇ ರೀತಿ ಇವೆ. ಅದರಂತೆಯೇ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ.

ಮೊದಲಿಗೆ ಉತ್ತರ ಕ್ಷೇತ್ರವನ್ನು ಹೆಚ್.ಡಿ ದೇವೇಗೌಡರಿಗೆ ಬಿಟ್ಟುಕೊಟ್ಟಿದ್ದೆವು.ದೇವೇಗೌಡರು ತುಮಕೂರು ಬಯಸಿದ್ದರಿಂದ ಕೃಷ್ಣ ಭೈರೇಗೌಡರನ್ನು ಇಲ್ಲಿನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ಇಲ್ಲಿಂದ ಗೆದ್ದು ಹೋದ ಡಿ.ವಿ. ಸದಾನಂದಗೌಡರು ಯಾವುದೇ ಕೆಲಸ ಮಾಡಲಿಲ್ಲ. ಬದಲಿಗೆ ಡಿವಿಎಸ್ ನಗುತ್ತಲೇ ಇಡೀ ಐದು ವರ್ಷ ಕಾಲ ಕಳೆದರು. ಇದೀಗ ನಿಮ್ಮ ಕೆಲಸ ಮಾಡಿಕೊಡಬಲ್ಲ ದಕ್ಷ ಅಭ್ಯರ್ಥಿ ಕೊಟ್ಟಿದ್ದೇವೆ. ಇವರು ಶಾಸಕನಾಗಿ ಸಂಸದನಾಗಿ ಸಾಕಷ್ಟು ಅನುಭವ ಹೊಂದಿದ್ದಾರೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos